ರಾಯಚೂರು ಜಿಲ್ಲೆಯ ಲಿಂಗಸುಗೂರ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಮಧ್ಯಾನ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ಕುಂದು ಕೊರತೆ ಹಾಗೂ ರೋಗಿಗಳ ಕುಂದು ಕೊರತೆ ಆಲಿಸಿದರು. ನಂತರ ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳು ವೈದ್ಯರ ಕುರಿತು ಕೂಡಲೇ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಹಾಗೂ ಸಚಿವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ನಯೋಪ್ರಾ ಅಧ್ಯಕ್ಷ ಭೂಪನಗೌಡ ,ಮುಖ್ಯ ವೈದ್ಯಾಧಿಕಾರಿ ಡಾ.ರುದ್ರಗೌಡ ಪೊಲೀಸ್ ಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.