ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರಸುದಾರರಿಲ್ಲದೆ ನಿಂತಿರುವ ವಾಹನಗಳನ್ನ ಪಟ್ಟಿ ಮಾಡಿ ಸಂಚಾರ ಪೊಲೀಸ್ ವಿಭಾಗಕ್ಕೆ ನೀಡುವಂತೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 10ರಂದು ಬೆಳಿಗ್ಗೆ 9 ಗಂಟೆಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು,'ಬಹಳ ದಿನಗಳಿಂದ ರಸ್ತೆ ಬದಿ ನಿಂತಿರುವಂತಹ ವಾರಸುದಾರರಿಲ್ಲದ ವಾಹನಗಳಿಂದ ಸುಗಮ ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಆಗಲಿದೆ. ಅಂಥವುಗಳ ಪಟ್ಟಿ ತಯಾರಿಸಿ ಸಂಚಾರ ಪೊಲೀಸ್ ವಿಭಾಗಕ್ಕೆ ನೀಡಿ' ಎಂದು ಅಧಿಕಾರಿಗಳಿಗೆ ಸೂಚಿಸಿದರು.