ಹೈದರಾಬಾದ್‌ನ ಮಿಯಾಪುರ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಲಬುರಗಿ ಜಿಲ್ಲೆಯ ಒಂದೇ ಕುಟುಂಬಕ್ಕೆ ಸೇರಿದ ಐವರ ಶವ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ರಂಜೋಳ ಗ್ರಾಮದ ಲಕ್ಷ್ಮಯ್ಯ (60), ವೆಂಕಟಮ್ಮ (55), ಅನಿಲ್ (32), ಕವಿತಾ (24), ಮತ್ತು ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ. ಈ ಕುಟುಂಬವು ಕಳೆದ ಆರು ವರ್ಷಗಳಿಂದ ಹೈದರಾಬಾದ್‌ನಲ್ಲಿ ವಾಸಿಸುತ್ತಿತ್ತು. ಸಾಮೂಹಿಕ ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ತನಿಖೆ ಆರಂಭಿಸಿದ್ದಾರೆ. ಈ ಕುರಿತು ಗುರುವಾರ 2 ಗಂಟೆಗೆ ಮಾಹಿತಿ ಲಭ್ಯವಾಗಿದೆ...