ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಿಜಾಮ್ (33) ಬಂಧಿತ ಆರೋಪಿ. ಈತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾ.ದಂ.ಸಂ. ರಂತೆ ಪ್ರಕರಣ ದಾಖಲಾಗಿದ್ದು, ನ್ಯಾಯಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಮಧ್ಯೆ ಆರೋಪಿಯು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ, ಪ್ರಕರಣದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.