ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ ಮಾಡಿದರು. ರೈತರ ಬೆಳೆದ ಈರುಳ್ಳಿ ಬೆಳೆಯು ಮಳೆಯಿಂದ ಹಾಳಾಗಿದೆ. ಹಾಗೂ ಕಳಪೆ ಈರುಳ್ಳಿ ಬೀಜ ವಿತರಣೆ ಮಾಡಿದ ಅಂಗಡಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೂ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.