ಚನ್ನಪಟ್ಟಣ -- ಬ್ಯಾಂಕ್‌ನಿಂದ ಸಾಲ ಪಡೆದಿರುವ ಸದಸ್ಯರುಗಳು ಸಕಾಲಕ್ಕೆ ಸಾಲವನ್ನು ಮರುಪಾವತಿ ಮಾಡುವ ಮೂಲಕ ಬ್ಯಾಂಕ್‌ನ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಭ್ಯುದಯ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷೆ ಗೀತಾಂಜಲಿ ಅಭಿಲಾಷ್ ಮನವಿ ಮಾಡಿದರು. ನಗರದ ಮಹೇಶ್ವರ ಕಲ್ಯಾಣಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಬ್ಯಾಂಕ್ ನ 26ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಹಿರಿಯ ಸಹಕಾರಿ ಧುರೀಣರಾದ ವಿಜಯಲಕ್ಷ್ಮಿ ರಾಮಣ್ಣನವರು ಸ್ಥಾಪಿಸಿದ ಈ ಬ್ಯಾಂ