ರಾಜ್ಯಾದ್ಯಂತ ಸೆಪ್ಟೆಂಬರ್ 22 ರಿಂದ ಹಿಂದುಳಿದ ವರ್ಗಗಳ ಆಯೋಗದಿಂದ ಆರಂಭಗೊಂಡಿರುವ ಜಾತಿವಾರು ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆಯ ಅಂಗವಾಗಿ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ತಾಲೂಕ ಕಚೇರಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕಿ ಜಿ ಕರೆಮ್ಮ ನಾಯಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಗಣತಿ ದಾರರು ಸಮರ್ಪಕವಾಗಿ ಮಾಹಿತಿ ಸಂಗ್ರಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಸಲಹೆ ನೀಡಿದರು ಈ ಸಂದರ್ಭದಲ್ಲಿ ತಹಸಿಲ್ದಾರ್ ನಾಗರತ್ನ ಕಟ್ಟಿಮನಿ, ಅಮರೇಶ ಬಿರೆದಾರ, ಹಿಂದುಳಿದ ವರ್ಗಗಳ ತಾಲೂಕ ಅಧಿಕಾರಿ ಬಾಬುರಾವ್ ಸೇರಿದಂತೆ ಇತರರು ಭಾಗವಹಿಸಿದ್ದರು.