ಹಿಂದುಗಳ ಧಾರ್ಮಿಕ ಸ್ಥಳವಾಗಿರುವ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರ ಖಂಡಿಸಿ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಹಾಗೂ ಯುವ ಬ್ರಿಗೇಡ್ ಯುವತಿಯಿಂದ ಗುರುವಾರ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯಲ್ಲಿ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ವಿಶೇಷ ತನಿಖಾ ದಳದ ಮೂಲಕ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.