ಮಹಾರಾಷ್ಟ್ರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಭೀಮಾ ನದಿಗೆ 1.60 ಲಕ್ಷ ಕ್ಯೂಸೆಕ್ ಹರಿ ಬಿಡಲಾಗಿದ್ದು ಭಾರಿ ಪ್ರಮಾಣದಲ್ಲಿ ತುಂಬಿ ಹರಿಯುತ್ತಿದೆ. ಭೀಮ ಮತ್ತು ಕೃಷ್ಣಾ ನದಿಗಳು ತುಂಬಿ ಹರಿಯುತ್ತಿದ್ದು ನದಿಯ ಕಡೆಗೆ ಸಾರ್ವಜನಿಕರು ಹೋಗದಂತೆ ಜಿಲ್ಲಾ ಆಡಳಿತ ಪೊಲೀಸ್ ಇಲಾಖೆ ಎಚ್ಚರಿಕೆ ನೀಡುತ್ತಿದ್ದರು ಶನಿವಾರ ಮಧ್ಯಾಹ್ನ ಯಾದಗಿರಿ ಬಳಿಯಲ್ಲಿನ ಭೀಮಾ ನದಿಯಲ್ಲಿ ಸ್ನಾನ ಮಾಡಲು ಸಾರ್ವಜನಿಕರು ಹೋಗಿ ನದಿಗೆ ಇಳಿದಿರುವುದು ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಎಚ್ಚರಿಕೆಯ ಮಧ್ಯೆಯು ನದಿಯ ಕಡೆಗೆ ಹೋಗಿ ಹುಚ್ಚಾಟ ಮೆರೆಯುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿ ಬರುತ್ತಿದೆ.