ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಶಾಂತ ರೀತಿಯಿಂದ ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಿ ಹಬ್ಬಗಳನ್ನು ಆಚರಿಸಬೇಕು ಎಂದು ಹುನಗುಂದ ಡಿವಾಯ್‌ಎಸ್‌ಪಿ ವಿಶ್ವನಾಥರಾವ್ ಕುಲಕರ್ಣಿ ಹೇಳಿದರು. ಬಾಗಲಕೋಟ ಜಿಲ್ಲೆಯ ಇಳಕಲ್ ಪೋಲಿಸ್ ಠಾಣೆಯಲ್ಲಿ ಅಗಸ್ಟ ೨೧ ಸಾಯಂಕಾಲ ೬ಗಂಟೆಗೆ ನಡೆದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಗಣೇಶ ಚತುರ್ಥಿಸಮಯದಲ್ಲಿ ಡಿಜೆಗೆ ಅವಕಾಶ ಇಲ್ಲ, ಗಲ್ಲಿಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಫನೆ ಮಾಡುವವರು ಕಡ್ಡಾಯವಾಗಿ ಪರವಾನಿಗೆಯನ್ನು ಪಡೆದಕೊಳ್ಳಬೇಕು ಎಂದು ಹೇಳಿದರು. ಈ ಸಮಯದಲ್ಲಿ ಸಿಪಿಐ ಸುನೀಲ ಸವದಿ, ಪಿಎಸ್‌ಐ ಮಂಜುನಾಥ ಪಾಟೀಲ, ಮಲ್ಲಿಕಾರ್ಜುನ ಸತ್ತಿಗೌಡರ, ಎಸ್.ಆರ್.ನಾಯಕ, ಕಿರಶ್ಯಾಳ, ಉಪತಹಸೀಲ್ದಾರ ಈಶ್ವರ ಗಡ್ಡಿ, ನಗರಸಭೆ ಪೌರಾಯಕ್ತ