ಅನಾರೋಗ್ಯ ಹಿನ್ನೆಲೆ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಮೆದೇಹಳ್ಳಿ ಗ್ರಾಮದ PMS ಲೇಔಟ್ ನಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನ ದರ್ಶನ್ (24) ಎಂದು ಗುರುತಿಸಲಾಗಿದೆ. ಎಂ.ಟೆಕ್ ಪದವಿದರನಾಗಿದ್ದ ಯುವಕ, ಮನೆಯ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಎನ್ನಲಾಗಿದ್ದು, ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಚಿತ್ರದುರ್ಗ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.