ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ತುಮಕೂರಿನಲ್ಲಿ ನಡೆಯಲಿರುವ ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಳ್ಳುವ ಯುವ ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆಯಲ್ಲಿ ನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ನೃತ್ಯ, ನಾಟಕ, ಸಂಗೀತ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರತಿದಿನ ಸಂಜೆ 4ರಿಂದ ರಾತ್ರಿ 10ರವರೆಗೆ ಆಯೋಜಿಸಲಾಗುವುದಾಗಿ ಹೇಳಿದರು. ಕೃಷಿ, ಕೈಗಾರಿಕೆ, ವಿಜ್ಞಾನ, ಆರೋಗ್ಯ, ಶಿಕ್ಷಣ ಮತ್ತಿತರ ಕ್ಷೇತ್ರಗಳ ಸಾಧನೆಗಳನ್ನು ಒಳಗೊಂಡ ವಸ್ತು ಪ್ರದರ್ಶನವು ಪ್ರಮುಖ ಆಕರ್ಷಣೆಯಾಗಲಿದೆ. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾಂಸ್ಕೃತಿಕ ಸಮಿತಿಯ ಸದಸ್ಯರು ಉಪಸ್ಥಿತರ