ಗಣೇಶ ವಿಸರ್ಜನೆ ವೇಳೆ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟದಂಥಹ ಘಟನೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮೊದಲನೆಯದ್ದಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸೆಪ್ಟೆಂಬರ್ 8ರಂದು ಬೆಳಿಗ್ಗೆ 11 ಗಂಟೆಗೆ ಜೆ.ಪಿ.ಭವನದಲ್ಲಿ ಪ್ರತಿಕ್ರಿಯಿಸಿದ ಅವರು,"ಈ ಹಿಂದೆ ನಾಗಮಂಗಲದಲ್ಲಿಯೂ ಇದೇ ರೀತಿಯ ಘಟನೆ ನಡೆದಿತ್ತು.ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಾಂಗ್ರೆಸ್ ಸರ್ಕಾರ ಧಕ್ಕೆಯುಂಟು ಮಾಡುತ್ತಿದೆ.ಈ ಘಟನೆಗೆ ನೇರ ಹೊಣೆಗಾರಿಕೆಯನ್ನ ಸರ್ಕಾರವೇ ಹೊರಬೇಕು' ಎಂದರು