ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಡಣದಲ್ಲಿ ನಡೆದಿದೆ.ಅಜರುದ್ದೀನ್ ಅಬ್ದುಲ್ ರಜಾಕ್ ಮಕಾನದಾರ್ (38) ಕೊಲೆಯಾದ ವ್ಯಕ್ತಿ. ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ನಿವಾಸಿ. ಕೆಲಸದ ನಿಮಿತ್ತ ವಿಜಯಪುರದ ಅಲಮೇಲ ಪಟ್ಟಣದಲ್ಲಿ ವಾಸವಾಗಿದ್ದರು. ಬೈಕ್ ನಲ್ಲಿ ತೆರಳುತ್ತಿದ್ದಾಗ ಅಜರುದ್ದೀನ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಘಟನಾ ಸ್ಥಳಕ್ಕೆ ಬುದುವಾರ ಸಾಯಂಕಾಲ 4ಗಂಟೆ ಸುಮಾರಿಗೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.