ತಾಲ್ಲೂಕಿನ ಪಿ.ನಾಗೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಎ.ಸುಬ್ರಮಣಿ ಹಾಗೂ ಉಪಾಧ್ಯಕ್ಷರಾಗಿ ಆರ್.ಲೋಕೇಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶಿವಲಿಂಗಪ್ಪ ತಿಳಿಸಿದ್ದಾರೆ. ಈ ವೇಳೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಮಾಜಿ ಜಿ.ಪಂ ಸದಸ್ಯರಾದ ಪಿ.ಎನ್.ಪ್ರಕಾಶ್ ಅಭಿನಂಧಿಸಿ, ನಮ್ಮ ಪಕ್ಷ ಬೆಂಬಲಿತ ನಿರ್ದೇಶಕರು ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿರುವುದು ಸಂತಸದ ವಿಚಾರವಾಗಿದೆ. ಮುಂಬರುವ ದಿನಗಳಲ್ಲಿ ಸಹಕಾರ ಸಂಘದಲ್ಲಿನ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ಪಡೆದು ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ ಎಂದು ಹೇಳಿದರು.