ಮೊಳಕಾಲ್ಮುರು:-ಪಟ್ಟಣದ ಶಿರಿಡಿ ಸಾಯಿ ಬಾಬಾ ದೇವಸ್ಥಾನ ಗುರುವಾರ ಬೆಳಿಗ್ಗೆ 11ಗಂಟೆಗೆ ವಿಶೇಷವಾಗಿ ಹಣ್ಣಿನ ಅಲಂಕಾರ ಮಾಡಲಾಗಿತ್ತು. ದಸರಾ ಹಬ್ಬದ ಹಿನ್ನೆಲೆಯಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ಪ್ರತಿನಿತ್ಯ ದೇವರಿಗೆ ವಿವಿಧ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ, ಸೇಬು ಬಾಳೆಹಣ್ಣು ದ್ರಾಕ್ಷಿ ಸೇರಿದಂತೆ ವಿವಿಧ ಬಗೆಯ ಹಣ್ಣುಗಳಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರತಿ ವರ್ಷವೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜಾ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತದೆ.