ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಭಾನುವಾರ ತಾಲೂಕಿನ ಹಿರೀಸಾವೆ ಹೋಬಳಿಯ ಬ್ಯಾಡರಹಳ್ಳಿ ಗೇಟ್ ಬಳಿ ಎನ್ ಎಚ್ 75ರಲ್ಲಿ ನಡೆದಿದೆ.ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಹುಳಿಗೆರೆ ಗ್ರಾಮದ ಶಂಕರೇಗೌಡ (53) ಶ್ರೀನಿವಾಸಮೂರ್ತಿ (55) ಮೃತ ವ್ಯಕ್ತಿಗಳು. ರಾಷ್ಟ್ರೀಯ ಹೆದ್ದಾರಿ 75 ನ್ನು ದಾಟುತ್ತಿದ್ದಾಗ ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಬರುತ್ತಿದ್ದ ಮಹೇಂದ್ರ ಮಹೇಂದ್ರ ಎಕ್ಸ್ ಯೂ ಕಾರ್ ಡಿಕ್ಕಿ ಹೊಡೆದಿದೆ, ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.