ಮಳವಳ್ಳಿ ತಾಲ್ಲೂಕಿನ ಗುಂಡಾಪುರ ಗ್ರಾಮದಲ್ಲಿ ಬಾಷ್ ಇಂಡಿಯಾ ಕಂಪನಿಯ ಸಿಎಸ್ಆರ್ ಅನುದಾನದಡಿಯಲ್ಲಿ 30 ಲಕ್ಷ ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳ ನವೀಕರಣ ಮತ್ತು ನೂತನ ರಂಗಮಂದಿರ ನಿರ್ಮಾಣ ಕಾಮಗಾರಿಗೆ ಶಾಸಕರು ಹಾಗೂ ರಾಜ್ಯ ಮಾಲಿನ್ಯ ಮಂಡಳಿಯ ಅಧ್ಯಕ್ಷರಾದ ಪಿಎಂ ನರೇಂದ್ರಸ್ವಾಮಿ ಭೂಮಿಪೂಜೆ ನೆರವೇರಿಸಿದರು. ನಂತರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಮಾತನಾಡಿ, ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಖಾಸಗಿ ಸಂಸ್ಥೆಗಳು ನೀಡುತ್ತಿರುವ ಕೊಡುಗೆ ಅಪಾರವಾದದ್ದು ಎಂದು ತಿಳಿಸಿದರು. ಬಾಷ್ ಕಂಪನಿಯವರು ತಮ್ಮ ಸಿಎಸ್ಆರ್ ಅನುದಾನದಲ್ಲಿ ನಮ್ಮ ತಾಲೂಕಿನ ಎರಡು ಶಾಲೆಗಳ ಹೊಸದಾಗಿ ನಿರ್ಮಾಣ ಮಾಡುವುದಕ್ಕೆ ಜವಾಬ್ದಾರಿಯನ್ನು ತೆಗೆದುಕೊಂಡು ಮು