ಚಾಮರಾಜೇಶ್ವರಸ್ವಾಮಿ ಗಿರಿಜಾ ಕಲ್ಯಾಣ ಮಹೋತ್ಸವ ಹಾಗೂ ಜು.10 ರಂದು ಆಷಾಢಮಾಸದಲ್ಲಿ ನಡೆಯುವ ಚಾಮರಾಜೇಶ್ವರಸ್ವಾಮಿ ರಥೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಕೋಮುವಾರು ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಚಾಮರಾಜೇಶ್ವರಸ್ವಾಮಿ ದೇವಾಲಯದಲ್ಲಿ ಚಾಮರಾಜೇಶ್ವರಸ್ವಾಮಿ ಗಿರಿಜಾ ಕಲ್ಯಾಣ ಮಹೋತ್ಸವ ಹಾಗೂ ರಥೋತ್ಸವ ಸಂಬಂಧ ಗುರುವಾರ ನಡೆದ ಕೋಮುವಾರು ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಭಾಗವಹಿಸಿದ್ದ ತಹಸೀಲ್ದಾರ್ ಗಿರಿಜಾ ಮಾತನಾಡಿ, ಚಾಮರಾಜೇಶ್ವರಸ್ವಾಮಿ ಗಿರಿಜಾ ಕಲ್ಯಾಣ ಮಹೋತ್ಸವ ಹಾಗೂ ರಥೋತ್ಸವದ ಆಹ್ವಾನ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸಲಾಗುತ್ತದೆ ಎಂದರು.