ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಸುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದಾರೆ. ಬೈರಮಂಗಲದ ರಾಮಮಂದಿರದ ಬಳಿ ಶನಿವಾರ ನೂರಾರು ರೈತರುಣ ರೈತ ಮಹಿಳೆಯರು ಧರಣಿಯಲ್ಲಿ ಭಾಗವಹಿಸಿದ್ದರು. ನಮ್ಮ ಭೂಮಿ ನಮ್ಮಹಕ್ಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.