ಮಹಾಮಳೆಯಿಂದ ಹಾಗೂ ಭೀಮ ನದಿ ನೀರಿನಿಂದ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು ಈ ಪ್ರದೇಶಗಳ ವೀಕ್ಷಣೆಗೆ ನಾಳೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿಕೆ ನೀಡಿದ್ದಾರೆ. ಭಾನುವಾರ ಮಧ್ಯಾನ ವಡಿಗೇರ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ರೈತರ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಾಧ್ಯಮಗಳಿಗೆ ಹೇಳಿಕೆ ನೀಡಿ,ಮುಖ್ಯವಾಗಿ ಸರಿಯಾದ ರೀತಿಯಲ್ಲಿ ಸಮೀಕ್ಷೆಯನ್ನು ಮಾಡಿ ಸರ್ಕಾರಕ್ಕೆ ಅಧಿಕಾರಿಗಳು ವರದಿಯನ್ನು ಸಲ್ಲಿಸಬೇಕು ಇದಕ್ಕೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಪರಿಹಾರವನ್ನು ನೀಡಬೇಕು ಎಂದರು. ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಉಪಸ್ಥಿತರಿದ್ದರು