ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹೆಡಗಿನಾಳ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿಗಳನ್ನು ಕಟ್ಟಲು ಶಾಸಕ ಹಂಪನಗೌಡ ಬಾದರ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ತದನಂತರ ಮಾತನಾಡಿದ ಅವರು ಕಾಮಗಾರಿಯನ್ನು ಅಚ್ಚುಕಟ್ಟಾಗಿ ಮಾಡಬೇಕು ಕಾಲಮಿತಿಯಲ್ಲಿ ಕಾಮಗಾರಿಯನ್ನು ಮುಗಿಸಬೇಕು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಮುಂದೆ ನಿಂತು ಕೆಲಸ ಮಾಡಿಸಿಕೊಳ್ಳಬೇಕು ಒಂದು ವೇಳೆ ಕಳಪೆ ಕಂಡುಬಂದಲ್ಲಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ನಿರ್ದಾಕ್ಷಣೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.