ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆರೆ ಹಾಗೂ ರಾಜಕಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಕ್ರಮವಹಿಸಲು ಆಯುಕ್ತರಾದ ರಮೇಶ್ ಡಿ.ಎಸ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 10ರಂದು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದ ಸಭೆಯನ್ನ ಉದ್ದೇಶಿಸಿ ಸಂಜೆ 5 ಗಂಟೆಗೆ ಮಾತನಾಡಿದ ಅವರು, ಪೂರ್ವ ಪಾಲಿಕೆ ವ್ಯಾಪ್ತಿಯಲ್ಲಿ 46 ಕೆರೆಗಳು ಬರಲಿದ್ದು, ಈ ಪೈಕಿ ಒತ್ತುವರಿಯಾಗಿರುವ ಕೆರೆಗಳಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಪ್ರಕರಣಗಳನ್ನು ಪರಿಶೀಲಿಸಿ ಕೂಡಲೇ ತೆರವು ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.