ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಸರ್ಕಿಟ್ ಹೌಸ್ ಸರ್ಕಲ್ ನಲ್ಲಿ ಬುಧವಾರ ನಡೆದಿದೆ. ನಂದಿನಿ ಹಾಲಿನ ವಾಹನ ಹಾಗೂ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಮೆಡಿಕಲ್ ವಿದ್ಯಾರ್ಥಿಗಳಾದ ಆದಿತ್ಯ ಹಾಗೂ ಸಂದೀಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಶವಗಾರಕೆ ಮೃತ ದೇಹಗಳನ್ನ ರವಾನಿಸಲಾಗಿದೆ.ಪಶ್ಚಿಮ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.