ಯುವಶಕ್ತಿ ದೇಶದ ಆರ್ಥಿಕಾಭಿವೃದ್ಧಿಗೆ ಬಳಕೆಯಾಗಲು ಉದ್ಯಮ ಶೀಲತೆ ಸಹಕಾರಿ ಮಧು ಕೋಲಾರ : ಯುವ ಶಕ್ತಿಯು ದೇಶದ ಆರ್ಥಿಕ ಅಭಿವೃದ್ಧಿಗೆ ಬಳಕೆಯಾಗಲು ಉದ್ಯಮ ಶೀಲತೆ ಸಹಕಾರಿಯಾಗಿದೆ ಎಂದು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕ ಎಂ.ಎಸ್.ಮಧು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ ಆಶ್ರಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮೂರು ದಿನಗಳ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಯುವ ಶಕ್ತಿಯನ್ನು ಉದ್ಯಮಶೀಲರನ್ನಾಗಿಸಲು ವಿದ್ಯಾರ್ಥಿ