ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ನೇರಲಗಿಯ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸಡಗರ ಸಂಭ್ರಮದಿಂದ ನೆರವೇರಿತು. ಇನ್ನು ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ನಾಡಿನ ಒಳಿತಿಗಾಗಿ ಸಂಸದರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಸ್ವಾಮೀಜಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.