ವಿಜಯಪುರ ಜಿಲ್ಲೆಯಾದಂತ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಅವಾಂತರಕ್ಕೆ ರೈತರು ಬೆಳೆದ ಬೆಳೆಯುವ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿದೆ. ರೈತರು ಬೆಳೆದ ತೊಗರಿ ಹತ್ತಿ ಮೆಕ್ಕೆಜೋಳ ಅತಿವೃಷ್ಟಿಗೆ ಹಾನಿಯಾದ ಹಿನ್ನಲೆ, ಶನಿವಾರ ಸಾಯಂಕಾಲ 4ಗಂಟೆ ಸುಮಾರಿಗೆ ಬಿಜೆಪಿ ಜಿಲ್ಲಾ ರೈತ ಮೋರ್ಚ ದಿಂದ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮದ ಹಾನಿಯಾದ ರೈತರ ಜನಗಳಿಗೆ ಭೇಟಿ ನೀಡಿದರು. ರಾಜ್ಯ ಸರ್ಕಾರ ಕೂಡಲೇ ಅತಿವೃಷ್ಟಿಯಿಂದ ಹಾನಿಯಾದ ರೈತರಿಗೆ ಸೂಕ್ತವಾದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.