ಶಿವಮೊಗ್ಗ ನಗರದ ಅತ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೃಹತ್ ಮರ ಒಂದು ರಸ್ತೆಗೆ ಅಡ್ಡಲಾಗಿ ಬಿದ್ದಿರುವಾಗ ಘಟನೆ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ಸಮೀಪದಲ್ಲಿ ಶುಕ್ರವಾರ ನಡೆದಿದೆ. ಗಾಳಿ ಮಳೆಗೆ ಮರ ಬಿದ್ದಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದು, ಸಮೀಪದಲ್ಲಿ ಟ್ರಾಫಿಕ್ ಸಿಗ್ನಲ್ ಬಿಟ್ಟ ಕೆಲವೇ ಕ್ಷಣಗಳಲ್ಲಿ ಮರ ಧರೆಗೆ ಉರುಳಿದೆ. ಹಾಗಾಗಿ ಯಾವುದೇ ವಾಹನಗಳು ಇಲ್ಲದ ಪರಿಣಾಮ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಮರವನ್ನ ತೆರವುಗೊಳಿಸುತ್ತಿದ್ದು ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.