ಸೆಲ್ಫಿ ಪ್ರಿಯರು ಅಪಾಯಕಾರಿ ಪ್ರದೇಶಗಳಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವ ಮುನ್ನ ಒಮ್ಮೆ ನೋಡಲೇಬೇಕಾದ ಸ್ಟೋರಿ ಇದು. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣು ಗುಂಡಿಗೆ ಪತ್ನಿಯ ಜೊತೆ ಪ್ರವಾಸಕ್ಕೆಂದು ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ 40 ವರ್ಷದ ಶಿಕ್ಷಕ ವೆಂಕಟೇಶ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಈ ಕುರಿತು ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.