ಹಾಸನ: ಶನಿವಾರ ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿಯವರ ಮುಂದೆ ತನ್ನ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆ ಬಿಕ್ಕಿ ಬಿಕ್ಕಿ ಅತ್ತು ಕಣ್ಣೀರಿಟ್ಟಿದ್ದಾರೆ.ಆಲೂರು ಮೂಲದ ಈ ಮಹಿಳೆ ತನ್ನ ಮನೆಗೆ ಅನಾಮಿಕರಿಂದ ಪತ್ರಗಳು ಬರುತ್ತಿವೆ, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರು ಯಾರು ಕ್ರಮ ಕೈಗೊಳ್ಳುತ್ತಿಲ್ಲ, ನಮಗೆ ಮನೆಯಲ್ಲಿ ನೆಮ್ಮದಿಯಾಗಿ ಬದುಕಲು ಆಗುತ್ತಿಲ್ಲ ಎಂದು ಮಹಿಳೆ ಕಣ್ಣೀರಿಟ್ಟು ಗೋಗರೆದಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ ಕೂಡಲೇ ಅವರ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.