ಜಿಲ್ಲಾಡಳಿತ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ 126 ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆ ಕಾಮಗಾರಿಗೆ, ಎರಡನೇ ಹಂತದಲ್ಲಿ 272 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವತಿ ಯೋಜನೆಯ ಕಾಮಗಾರಿಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟನೆಯನ್ನು ನೆರವೇರಿದರು. ಈ ವೇಳೆ ಸಿಎಂ ಸಿದ್ಧರಾಮಯ್ಯ ಮಾತನಾಡಿ, ಈ ಯೋಜನೆಯಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ನಡೆಯಲಿದೆ ಎಂದರು.