ಕಲಬುರ್ಗಿ ಜಿಲ್ಲೆಯ ಕೃಷಿ ಮಾರುಕಟ್ಟೆಯ ಕನ್ನಡ ನಾಮ ಫಲಕವನ್ನು ತೆರವುಗೊಳಿಸಿದಕ್ಕೆ ಮತ್ತು ಕರವೇ ಕಾರ್ಯಕರ್ತರನ್ನು ಬಂಧನ ಮಾಡಿರುವುದನ್ನು ಖಂಡಿಸಿ, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡಿ ತಹಸಿಲ್ದಾರ್ ವೈ.ಎಸ್.ಸೋಮನಕಟ್ಟಿ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು. ಕನ್ನಡ ನಾಮಪಲಕ ತೆರವು ಮಾಡಿದ ಕಿಡಗೇಡಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.