ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ: ಕುರ್ಕಿ ರಾಜೇಶ್ವರಿ ಆರೋಪ ಕೋಲಾರ : ತಾಲ್ಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ ಮಾಡಿಕೊಂಡಿದ್ದಾರೆ. ಲೋಕೋಪಯೋಗಿ, ತಾಪಂ ಇಒ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ನೋಟಿಸ್ ನೀಡದೇ ಕಟ್ಟಡದ ಖಾತೆ ರದ್ದು ಮಾಡಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಿಯಮಬದ್ಧವಾಗಿ ನೋಟಿಸ್ ನೀಡಿ ಪರಿಹಾರ ನೀಡಿ ಖಾಸಗಿ ಸ್ವತ್ತು ತೆಗೆದುಕೊಳ್ಳಬೇಕು. ಆದರೆ, ಅಧಿಕಾರಿಗಳು