ರಾಜ್ಯದಾದ್ಯಂತ ಅತಿವೃಷ್ಠಿ ಮತ್ತು ವ್ಯಾಪಕ ಮಳೆಯಿಂದಾಗಿ 10 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಕೃಷಿ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಎನ್‌ಡಿಆರ್‌ಎಫ್ ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 8,500 ರೂ. ಪರಿಹಾರ ನೀಡಲಾಗುವುದು. ಇದರಿಂದ ಮಳೆಯಾಶ್ರಿತ ಬೆಳೆಗಳಿಗೆ ಒಟ್ಟು 17,000 ರೂ., ನೀರಾವರಿ ಬೆಳೆಗಳಿಗೆ 25,500 ರೂ. ಹಾಗೂ ಬಹುವಾರ್ಷಿಕ ಬೆಳೆಗಳಿಗೆ 31,000 ರೂ. ಪರಿಹಾರ ಸಿಗಲಿದೆ. ಜೂನ್ ದಿಂದ ಸೆಪ್ಟೆಂಬರ್ 29ರವರೆಗೆ 879 ಮಿಮೀ ಮಳೆಯಾಗಿದ್ದು, ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಶೇ.90ರಷ್ಟು ಹಾನಿ ಸಂಭವಿಸಿದೆ. ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿ 9