ಸೌಜನ್ಯ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೇಕಂತಲೇ ಹಿಂದು ದೇವಸ್ಥಾನ ಮತ್ತು ಹಿಂದುಗಳನ್ನು ಗುರಿ ಮಾಡಲಾಗುತ್ತಿದೆ. ಧರ್ಮಸ್ಥಳದ ವಿಷಯದಲ್ಲಿ ಕ್ರಿಶ್ಚಿಯನ್ನರು, ಕಮ್ಯುನಿಸ್ಟ್ರು, ಮುಸ್ಲಿಮರು ಇದ್ದಾರೆ. ಕಾಂಗ್ರೆಸ್ಸಿನವರೂ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದರು.