ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗುಂಜಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೂಲಿಕಾರ್ಮಿಕರು ಕೂಲಿ ಕೆಲಸಕ್ಕೆ ಎಂದು ತಾಲೂಕಿನ ಉಮಲೂಟಿ ಗ್ರಾಮದ ಕೆರೆಯಲ್ಲಿ ಕೆಲಸವನ್ನು ಮಾಡುತ್ತಿದ್ದು ಉದ್ಯೋಗ ಖಾತ್ರಿ ಕೂಲಿ ಕೆಲಸದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗಿದೆ ಕುಡಿಯುವ ನೀರಿನ ಸಮಸ್ಯೆ ನೆರಳಿನ ಸಮಸ್ಯೆ ಹಾಗೂ ವೈದ್ಯಕೀಯ ಚಿಕಿತ್ಸೆಯ ಸಮಸ್ಯೆ ಎದುರಾಗಿದ್ದರಿಂದ ತೊಂದರೆಯನ್ನು ಅನುಭವಿಸುತ್ತಿದ್ದೇವೆ ಎಂದು ಸಾರ್ವಜನಿಕರು ಮಾಹಿತಿಯನ್ನು ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ.