ಶಿವಮೊಗ್ಗ ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಶ್ರೀಗಂಧ ಕೋಠಿ ಆವರಣದಲ್ಲಿ ಗುರುವಾರ ಬೆಳಗ್ಗೆ ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನ ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.ಈ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಮಂಜುನಾಥ್ ನಾಯಕ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸಿತರಿದ್ದರು.