ಚಾಮರಾಜನಗರದ ಗಡಿಭಾಗವಾದ ದಿಂಬಂ ಘಾಟ್ ನಲ್ಲಿ ಕಾರು ಬಂಡೆಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾದ ಘಟನೆ ನಡೆದಿದೆ. ದಿಂಬಂ ಘಾಟ್ ನ 27ನೇ ಸುತ್ತಿನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಅಪಘಾತದಿಂದ ಪಾರಾಗಿದ್ದಾರೆ. ಕಾರಿನವರು ಚಾಮರಾಜನಗರದಿಂದ ಕೊಯಮತ್ತೂರು ಕಡೆಗೆ ಹೋಗುವ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ಮೊದಲು ಬಂಡೆಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ಇನ್ನು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ