ಇತ್ತೀಚಿನ ಕನ್ನಡ ಬ್ಲಾಕ್ ಬಸ್ಟರ್ ಚಿತ್ರ 'ಸು ಫ್ರಮ್ ಸೋ' ಚಿತ್ರದ ಹಾಡು ಬಂದರೋ ಬಂದರೋ ಬಾವ ಬಂದರೋ ಹಾಡು ಭಾರೀ ವೈರಲ್ ಆಗಿದ್ದು ಪುಟ್ಟ ಮಕ್ಕಳಿಂದ ಹಿಡಿದು ಇಳಿ ವಯಸ್ಸಿನವರೆಗೂ ರೀಲ್ ಮಾಡದವರಿಲ್ಲ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿನ್ನಡಿ ಗ್ರಾಮದಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಬಂದರೋ ಬಂದರೋ ಬಾವ ಬಂದರೋ ಹಾಡಿಗೆ ಯುವಕರು ಸಕ್ಕತ್ ಸ್ಟೆಪ್ಸ್ ಹಾಕಿದ್ದಾರೆ. ಸದ್ಯ ಈ ವಿಡಿಯೋ ಈ ಭಾಗದಲ್ಲಿ ಭಾರೀ ವೈರಲ್ ಆಗುತ್ತಿದೆ.