ಗೂಡ್ಸ್ ಲಾರಿ ಹಾಗೂ ಬೈಕ್ ಮಧ್ಯೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಇಟ್ಟಿಗಟ್ಟಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ 3 ಗಂಟೆಗೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಕುರವಿನಕೊಪ್ಪ ಮತ್ತು ಬೆಳಗಾವಿ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.