ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಯುವತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಾಡು ಮನೆ ರಸ್ತೆಯ ಸಾಯಿಬಾಬಾ ದೇವಸ್ಥಾನದ ಬಳಿ ಮಂಗಳವಾರ ಅಪಘಾತ ಸಂಭವಿಸಿದೆ. ಪೂರ್ಣಿಮಾ ಗಂಭೀರವಾಗಿ ಗಾಯಗೊಂಡ ಯುವತಿಯಾಗಿದ್ದು. ಉದ್ಯೋಗದ ಹಿನ್ನೆಲೆಯಲ್ಲಿ ಕೆಲಸಕ್ಕೆಂದು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪೂರ್ಣಿಮಾ ತಲೆ ಸೇರದಂತೆ ಇತರೆ ಭಾಗಗಳಿಗೆ ಗಂಭೀರವಾಗಿ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.