ಹನೂರು:ತಾಲ್ಲೂಕು ಪಂಚಾಯತಿ ವತಿಯಿಂದ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಮಾಸಿಕ ಸಂತೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ರಾಮಾಪುರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಈಶ್ವರ್ ಉದ್ಘಾಟಿಸಿ ಮಾತನಾಡಿ. ಸ್ವ ಸಹಾಯ ಗುಂಪುಗಳ ಮಹಿಳೆಯರು ತಾವು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಈ ಸಂತೆಯ ಮೂಲಕ ಮಾರುಕಟ್ಟೆಗೆ ತರುತ್ತಿದ್ದಾರೆ. ಇದರಿಂದ ಅವರು ಆರ್ಥಿಕವಾಗಿ ಸ್ವಾವಲಂಬಿ ಆಗುವ ಅವಕಾಶ ಸಿಗುತ್ತದೆ. ಈ ಯೋಜನೆ ಮಹಿಳೆಯರ ಬದುಕಿಗೆ ಹೊಸ ದಿಕ್ಕು ತರುತ್ತಿದೆ ಎಂದರು