ವೃದ್ಧ ವ್ಯಕ್ತಿಯೋರ್ವ ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಹೋಗಿದ್ದು ವಾಪಸ್ ಮನೆಗೆ ಬಾರದೆ ಕಾಣೆಯಾದ ಘಟನೆ ಬ್ಯಾಡಗಿ ತಾಲೂಕು ಕದರಮಂಡಲಗಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ ನಿಂಗಪ್ಪ ಅಸುಂಡಿ (79) ಕಾಣೆಯಾದ ವ್ಯಕ್ತಿಯಾಗಿದ್ದಾನೆ. ಈತ ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಹೋಗ್ಗಿದ್ದಾನೆ ಎಂದೂ ಆತನ ಮಗ ಹನುಮಂತಪ್ಪ ಅಸುಂಡಿ ದೂರು ದಾಖಲಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..