ಶಿಕ್ಷಣದ ಕ್ಷೇತ್ರದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ದೇಶದಲ್ಲಿಯೇ ಬಹುದೊಡ್ಡಮೈಲುಗಲ್ಲು ಆಗಿದ್ದಾರೆ. ಶಿಕ್ಷಕರು ವಸುದೈವ ಕುಟುಂಬಕಂ ಎಂಬ ಧೈಯದೊಂದಿಗೆ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಹಾಗೂ ಮೌಲಾಧ್ಯಾರಿತ ಶಿಕ್ಷಣವನ್ನು ಕೊಡಬೇಕಾಗಿದೆ ಎಂದು ಹರಸೂರು ಬಣ್ಣದಮಠದ ಅಭಿನವರುದ್ರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನೋತ್ಸವ ಕಾರ್ಯಕ್ರಮ ಪ್ರಯುಕ್ತ ಶುಕ್ರವಾರ ನಗರದ ಜಿಲ್ಲಾ ಗುರುಭವನದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.