Download Now Banner

This browser does not support the video element.

ಬಾಗೇಪಲ್ಲಿ: ಪಟ್ಟಣದಲ್ಲಿ ಕೆಸರು ಗದ್ದೆಯಂತಾದ ರಸ್ತೆ, ಪೈರು ನಾಟಿ ಆಕ್ರೋಶ ವ್ಯಕ್ತಪಡಿಸಿದ ಕರವೇ ಕನ್ನಡ ಸಂಘಟನೆಗಳ ಒಕ್ಕೂಟದ ಮುಖಂಡರು

Bagepalli, Chikkaballapur | Sep 2, 2025
ಬಾಗೇಪಲ್ಲಿ ಪಟ್ಟಣದಪಲ್ಲಿ ರಸ್ತೆಯು ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಕೆಸರು ಗದ್ದೆಗಳಾಗಿ ಪರಿಣಮಿಸಿದೆ. ಇದರ ಹಿನ್ನೆಲೆಯಲ್ಲಿ ಈ ಬಗ್ಗೆ ಹಲವು ಬಾರಿ ಪುರಸಭೆ ಸ್ಥಳೀಯ ಶಾಸಕರ ಗಮನಕ್ಕೆ ತಂದರು ಯಾವುದೇ ರೀತಿ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಮಂಗಳವಾರ ಸಂಜೆ ಕರ್ನಾಟಕ ರಕ್ಷಣಾ ವೇದಿಕೆ,ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸಂಘಟನೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಬಾಬಾ ಜಾನ್, ಪ್ರಧಾನ ಕಾರ್ಯದರ್ಶಿ ರವೀಂದ್ರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
Read More News
T & CPrivacy PolicyContact Us