ಕಾರವಾರ : ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕು ಹೊರತು ಪಡಿಸಿ ಮಿಕ್ಕುಳಿದ ಹನ್ನೊಂದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ನಾಳೆ ಸೋಮವಾರ ರಜೆಯನ್ನು ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಭಾನುವಾರ ಸಂಜೆ 7 ಗಂಟೆಗೆ ಅಧಿಕೃತ ಆದೇಶ ನೀಡಿದ್ದಾರೆ.