ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಮದ್ಯಪಾನದ ಹಾವಳಿಯ ವಿರುದ್ಧ ದೇಶವ್ಯಾಪಿ ಪ್ರತಿಭಟನಾ ಹಿನ್ನೆಲೆಯ ಭಾಗವಾಗಿ ಎಐಎಂಎಸ್‌ಎಸ್ ಜಿಲ್ಲಾ ಸಮಿತಿ ಗುರುವಾರ ಸಂಜೆ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಂಘಟನೆ ಜಿಲ್ಲಾ ಉಪಾಧ್ಯಕ್ಷೆ ಬನಶ್ರೀ ಮಾತನಾಡಿ, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ದೇಶಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಅವರ ಘನತೆಯ ಬದುಕಿಗಾಗಿ ಶ್ರಮಿಸುತ್ತಿದೆ. ‘ರಾಜ್ಯದಲ್ಲಿ ಇಂದಿಗೂ ಕದ್ದು ಮುಚ್ಚಿ ನಡೆಯುತ್ತಿರುವ ಭ್ರೂಣ ಹತ್ಯೆಯ ಘಟನೆಗಳು ಸಮಾಜದಲ್ಲಿರುವ ಹಳೆಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತವೆ ಎಂದು ಹೇಳಿದರು.