ನಾಯಕನಹಟ್ಟಿ ಪಟ್ಟಣದಲ್ಲಿ ಗುರುವಾರ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಅದ್ದೂರಿಯಾಗಿ ಆರಂಭವಾಗಿದೆ. ಟ್ರಾಕ್ಟರ್ ನಲ್ಲಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪನೆ ಮಾಡಿಕೊಂಡು ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯ ಗ್ರಾಮಗಳ ನೂರಾರು ಜನರು ಭಾಗವಹಿಸಿ, ಸಾಂಸ್ಕೃತಿಕ ಕಲಾ ತಂಡಗಳ ನಾದಕ್ಕೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳದರು. ಹಿಂದೂ ಮಹಾಗಣಪತಿಯ ಜೊತೆಗೆ ವಿವಿಧ ಕಡೆ ಪ್ರತಿಷ್ಠಾಪನೆ ಮಾಡಿದ ಗಣಪತಿ ಮೂರ್ತಿಗಳ ಮೆರವಣಿಗೆಯು ಜರುಗಿತು. ಮೆರವಣಿಗೆಯಲ್ಲಿ ಕೇಸರಿ ಧ್ವಜಾಗಳು ರಾರಾಜಿಸಿದವು.