ದಸರಾ ನಾಡ ಹಬ್ಬ ಉದ್ಘಾಟನೆ ವಿಚಾರವಾಗಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಬಾನು ಮುಸ್ತಾಕ್ ಅತಿಥಿಯಾಗಿದ್ದಾರೆ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರು, ಮೂರ್ತಿ ಪೂಜೆ ಒಪ್ಪದವರು. ದಸರಾಗೆ ಬಂದು ಏನ್ ಮಾಡ್ತಾರೆ. ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ ಆಗತ್ತೆ. ಅದನ್ನ ಅವರು ಮಾಡ್ತಾರಾ ? ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ನಾನು ಕನ್ನಡದಲ್ಲಿ ಎಲ್ಲಿ ನಿಲ್ಲಬೇಕು ಎಂದು ಬಾನು ಮುಸ್ತಾಕ್ ಕೇಳ್ತಾರೆ, ಕನ್ನಡ ಧ್ವಜವನ್ನೇ ಒಪ್ಪದವರು, ಚಾಮುಂಡೇಶ್ವರಿಯನ್ನ ಹೇಗೆ ಒಪ್ತಾರೆ ಎಂದರು.