ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಜೀವನ ಮೌಲ್ಯಗಳನ್ನು ಬೆಳಸಿ ಉತ್ತಮ ಸಮಾಜ ಕಟ್ಟಲು ಶ್ರೇಷ್ಠ ಮಾನವರನ್ನು ರೂಪಿಸುವ ಶಿಲ್ಪಿಗಳಾಗಿದ್ದಾರೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು. ಇಲ್ಲಿಯ ಗರುಡಾದ್ರಿ ಕಲಾ ಮಂದಿರದಲ್ಲಿ ಜಿಪಂ ಯಾದಗಿರಿ, ತಾಪಂ ಸುರಪುರ-ಹುಣಸಗಿ ಮತ್ತು ಶಾಲಾ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಸುರಪುರ-ಹುಣಸಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಶಿಕ್ಷಕರ ಪಾತ್ರ ಹಿರಿಯದಾಗಿದೆ. ಜ್ಞಾನ ಮತ್ತು ಮೌಲ್ಯಗಳನ್ನು ತುಂಬಿ ನಮ್ಮ ಜೀವನಕ್ಕೆ ದಾರಿ ತೋರಿ, ಉತ್ತಮ ಬದುಕು ಕಟ್ಟಿಕೊಳ್ಳಲು ನೆರವಾದ ಗುರುವಿನ ಸ್ಮರಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ತAದೆ-ತಾಯಿ ನಂತರ ನಮ್ಮ ಜೀವನ ರೂಪಿಸುವವರೆ ಶಿಕ್ಷ